elephants
ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚಿಕ್ಕಮಗಳೂರು ತಾಲ್ಲೂಕಿನಾದ್ಯಂತ ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಾಲ್ಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಜನಸಂಚಾರವನ್ನು ನಿಯಂತ್ರಿಸಲು ಈ ಕರ್ಫ್ಯೂ ವಿಧಿಸಲಾಗಿದೆ. ಸಂಜೆ 4 ಗಂಟೆಯಿಂದ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕರಿಗೆ ನಿರ್ಬಂಧಗಳು:
೧) ನಿಗದಿತ ಪ್ರದೇಶಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
೨) ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ
೩) ಪಟಾಕಿ ಅಥವಾ ಯಾವುದೇ ಸ್ಫೋಟಕ ವಸ್ತುಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ
೪) ಕಾನೂನು ಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…
ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…