ರಾಜ್ಯ

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು.

ಮಾನವ ಜೀವ ಅತ್ಯಮೂಲ್ಯವಾದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು ಜೀವ ಹಾನಿ ಆಗಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ಘಟನೆ ಮರುಕಳಿಸದಂತೆ 24×7 ನಿಗಾ ಇಡಬೇಕು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ ವನ್ಯಜೀವಿ ಸರೆ ಕಾರ್ಯಾಚರಣೆ ನಡೆಸಬೇಕು. ಅತ್ಯಾಧುನಿಕ ಸಲಕರಣೆಗಳಾದ ಥರ್ಮಲ್ ಡ್ರೋನ್ ಬಳಕೆ ಮಾಡಬೇಕು ಎಂದು ಸೂಚಿಸಿದರು.

ಚಿಕ್ಕಮಗಳೂರಿನಲ್ಲಿ ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ, ಆನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಕ್ಕೆ ಹೋಗದಂತೆ ಮಾಹಿತಿ ನೀಡಲಾಗಿತ್ತು. ಆದಾಗ್ಯೂ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ತೋಟಕ್ಕೆ ಕಳಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಿ, ತೋಟದ ಮಾಲೀಕರಿಗೂ ಜವಾಬ್ದಾರಿ ಇರಬೇಕು. ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಿ ಎಂದು ತಿಳಿಸಿದರು.

ಮಾಹಿತಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯದ ಹೊರಗೆ 35 ಆನೆಗಳು 3 ಗುಂಪಿನಲ್ಲಿ ಸಂಚರಿಸುತ್ತಿದ್ದು, ಬೇಸಿಗೆಯಲ್ಲಿ ಅವುಗಳು ಕಾಡಿನಿಂದ ಹೊರಬರುವುದು ಸಾಮಾನ್ಯ. ಆದಾಗ್ಯೂ ಸಿಬ್ಬಂದಿ ಮತ್ತು ಅಧಿಕಾರಿಗಳು ವನ್ಯಜೀವಿ-ಮಾನವ ಸಂಘರ್ಷ ಆಗದಂತೆ ನಿಗಾ ಇಡಬೇಕು. ಪ್ರತಿ ವರ್ಷ ವನ್ಯಜೀವಿ- ಮಾನವ ದಾಳಿಯಲ್ಲಿ ಆಗುತ್ತಿರುವ ಸಾವಿನ ಸಂಖ್ಯೆ ಇಳಿಕೆಯಾಗಬೇಕೇ ಹೊರತು, ಹೆಚ್ಚಳ ಆಗಬಾರದು ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

2 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

7 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

8 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

8 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

8 hours ago