big shocking for ksrtc transport unions
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ.
ಅಕ್ಟೋಬರ್ 29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಕುರಿತು ಚರ್ಚಿಸಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಸಾರಿಗೆ ಇಲಾಖೆಗೆ ವಹಿಸಲಾಗಿದೆ ಎಂದಿದ್ದಾರೆ.
ನವೆಂಬರ್ 3ರಂದು ನಾಲ್ಕೂ ಸಾರಿಗೆ ನಿಗಮಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನವೆಂಬರ್ 4ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟ ಹಾಗೂ ಹೆಚ್ಚುತ್ತಿರುವ ನಿರ್ವಹಣಾ ವೆಚ್ಚದ ಹಿನ್ನೆಲೆಯಲ್ಲಿ ದರ ಏರಿಕೆಯ ಪ್ರಸ್ತಾವ ಮುಂದಕ್ಕೆ ಬಂದಿದೆ.
ಆದರೆ, ಟಿಕೆಟ್ ದರ ಎಷ್ಟು ಹೆಚ್ಚಾಗಲಿದೆ? ಪರಿಷ್ಕೃತ ದರ ಯಾವಾಗ ಜಾರಿಗೆ ಬರಲಿದೆ? ಎಂಬುದು ಇನ್ನೂ ಘೋಷಣೆಯಾಗಿಲ್ಲ. ಸರ್ಕಾರದ ಅಂತಿಮ ನಿರ್ಧಾರದತ್ತ ಪ್ರಯಾಣಿಕರ ಗಮನ ನೆಟ್ಟಿದೆ.
ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ…
ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ…
ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…
ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಅನೇಕ ರಸ್ತೆಗಳಿಗೆ ಹಾಕಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ನಾನಾ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ…
ವೈಡ್ ಆಂಗಲ್:ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಭಾರತೀಯ ಚಿತ್ರರಂಗದ ಮೂರು ವಿಭಿನ್ನ ಮಾರ್ಗಗಳು ಮುಂದಿನ ತಿಂಗಳ ಮೊದಲ ವಾರ ವಿಶ್ವಾದ್ಯಂತ…