ರಾಜ್ಯ

ಯಾವ ಖಾತೆ ನೀಡಿದ್ರೂ ಸಮರ್ಥವಾಗಿ ನಿಭಾಯಿಸುವೆ: ವಿ.ಸೋಮಣ್ಣ

ನವದೆಹಲಿ: ನರೇಂದ್ರ ಮೋದಿ ಸಂಪುಟದಲ್ಲಿ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಮಂತ್ರಿ ಭಾಗ್ಯ ಫಿಕ್ಸ್‌ ಆಗಿದೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿ.ಸೋಮಣ್ಣ ಬಿಜೆಪಿ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಪಕ್ಷ ನನಗೆ ಯಾವ ಖಾತೆ ಕೊಟ್ರು ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ನಮಗೆ ಹೇಗೆ ನಡೆದುಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದಾರೆ. ಎಲ್ಲಕ್ಕಿಂತ ದೇಶ ದೊಡ್ಡದು ಎಂದು ತಿಳಿಸಿಕೊಟ್ಟಿದ್ದಾರೆ. ನಾನು ಮೋದಿ ಹಾಗೂ ಪಕ್ಷಕ್ಕೆ ಆಭಾರಿಯಾಗಿದ್ದೇನೆ ಎಂದರು.

ಸೋಮಣ್ಣ ಬಗ್ಗೆ ಒಂದಿಷ್ಟು ಮಾಹಿತಿ
ವಿ.ಸೋಮಣ್ಣ ಅವರು ರಾಮನಗರ ಜಿಲ್ಲೆಯ ದೊಡ್ಡಮರಳವಾಡಿಯಲ್ಲಿ ವೀರಣ್ಣ ಮತ್ತು ಕೆಂಪಮ್ಮ ದಂಪತಿಗಳಿಗೆ 1951ಜುಲೈ 20 ರಂದು ಜನಿಸಿದರು. ಸೋಮಣ್ಣ ಶೈಲಜಾ ದಂಪತಿಗಳಿಗೆ ಮೂರು ಮಕ್ಕಳಿದ್ದಾರೆ.  1983 ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಇವರು 2016 ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಯನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ 2018 ರಿಂದ 2023ರವರೆಗೆ ಬೆಂಗಳೂರಿನ ಗೋವಿಂದರಾಜ್‌ ನಗರ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಶಾಸಕರಾಗಿದ್ದರು. ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿ ಸಂಪುಟದಲ್ಲಿ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದರು. ಇದೀಗ 2024 ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ  ಸಂಸದರಾಗಿ ಆಯ್ಕೆಯಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

1 min ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

53 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

11 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago