Mysore
35
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

Farmers Attempt to Lay Siege to CM's House Protesting Land Acquisition

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್‌ ಫೋನ್‌ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್‌ ಬಳಕೆಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಈ ಬಗ್ಗೆ ವಿಶ್ವವಿದ್ಯಾನಿಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳನ್ನು ಮಾದಕವಸ್ತು ಮುಕ್ತಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಲ್ಲದೇ ವಿದ್ಯಾರ್ಥಿ ಚುನಾವಣೆಗಳ ಪುನರಾರಂಭದ ಕುರಿತು ಚರ್ಚೆ ನಡೆಸಿದ್ದಾರೆ.

ಮೊಬೈಲ್‌ ಬ್ಯಾನ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿವಿ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ.

 

Tags:
error: Content is protected !!