ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಇಲ್ಲಸಲ್ಲದ ಮಾತು ಹೇಳಿ ಮರ್ಯಾದೆ ಕಳೆದುಕೊಳ್ಳುವುದು ಬೇಡ ಎಂದು ತಿರುಗೇಟು ನೀಡಿದರು.
ಇನ್ನು ಈ ಹಿಂದೆ ಮಣಿಕಂಠ ರಾಥೋಡ್ ವಿಚಾರದಲ್ಲಿ ಇದೇ ಬಿಜೆಪಿಯವರು ಕಲಬುರ್ಗಿಗೆ ಬಂದು ನನ್ನ ರಾಜೀನಾಮೆ ಕೇಳಿದ್ರು. ಆಮೇಲೆ ಏನ್ ಆಯ್ತು ಎಂದು ಪ್ರಶ್ನೆ ಮಾಡಿದರು.
ಮೊದಲು ನಾನು ಕೇಳಿದ ಪ್ರಶ್ನೆಗಳಿಗೆ ಬಿಜೆಪಿಯವರು ಉತ್ತರ ನೀಡಲಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಪ್ರೂವ್ ಆಗಿದೆ. ಅದರ ಬಗ್ಗೆ ಮಾತನಾಡಿ. ಮುನಿರತ್ನ ಕೇಸ್, ಸಿ.ಟಿ.ರವಿ ಕೇಸ್ ಬಗ್ಗೆ ಏನ್ ಹೇಳ್ತಾರೆ. ನನ್ನ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದು ಕಿಡಿಕಾರಿದರು.
ಕೋವಿಡ್ ಹಗರಣದ ಬಗ್ಗೆ ಕುನ್ನಾ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಹಲವರು ಅಕ್ರಮ ಮಾಡಿರುವ ಬಗ್ಗೆ ಸಾಬೀತಾಗಿದೆ ಎಂದು ತಿರುಗೇಟು ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್‌ನಲ್ಲಿ ನನ್ನ ಹೆಸರೇ ಇಲ್ಲ. ಹೆಣ ಬಿದ್ದಾಗ ಮಾತ್ರ ಬಿಜೆಪಿಗೆ ರಾಜಕೀಯ ಬರೋದು ಎಂದು ಕಿಡಿಕಾರಿದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…