ಕೊಲ್ಲೂರು: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಎಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ ಎಂದರು.
ನಾನು ದೇವರ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ. ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಐದು ಗ್ಯಾರಂಟಿ ಜಾರಿ ನೋಡಿಕೊಳ್ಳಲು ತಾಲ್ಲೂಕು ಸಮಿತಿಗಳಿವೆ. ರಾಜ್ಯಮಟ್ಟದ ಸಮಿತಿ ಕೂಡ ಇದೆ. ಸಮಿತಿ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ ಅದು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…