ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಸ್ಪರ್ಧಿಸುವುದು ಇಲ್ಲ. ಯಾವುದೇ ಅಭ್ಯರ್ಥಿಯಾದರೂ ಸಹಾ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸಿದ್ಧತೆ ನಡೆಯುತ್ತಿದೆ. ಮಂತ್ರಿಗಳು ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿಲ್ಲ. ಚುನಾವಣೆಗೆ ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವಿಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭ್ಯರ್ಥಿಗಳ ಆಯ್ಕೆಯಾಗಲಿದೆ. ನಾನು ಅಭ್ಯರ್ಥಿಯಲ್ಲ. ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ನನ್ನ ಮಗ ಸುನಿಲ್ ಬೋಸ್ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ. ಸುನಿಲ್ ಬೋಸ್ ಗೆ 3 ಬಾರಿ ಎಂಎಲ್‌ಎ ಚುನಾವಣೆ ಟಿಕೆಟ್ ಕೈ ತಪ್ಪಿದ್ದರು ಎಲ್ಲಾ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಗೆಲ್ಲಿಸಲು ಶ್ರಮಿಸಿದ್ದಾನೆ. ನನ್ನ ಮಗನಿಗೇ ಟಿಕೆಟ್ ಕೊಡಿ ಎಂದು ನಾನು ಶಿಫಾರಸ್ಸು ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ವರಿಷ್ಠರ ತೀರ್ಮಾನ ಅಂತಿಮವಾಗಲಿದೆ ಎಂದರು.
ಇದೇ ವೇಳೆ ಮಾಂಸಹಾರ ಸೇವಿಸಿ ಸುತ್ತೂರಿಗೆ ಕಾಂಗ್ರೆಸ್ ನಾಯಕರು ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಮಾಂಸ ಸಾರು ಬಡಿಸಿದ್ರಾ? ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತಾಡ್ತಿದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ? ಮರಿ, ಮಾಂಸ ತಂದಿದ್ರಾ? ಲಿವರ್ ಫ್ರೈ ಮಾಡಿ ಕೊಟ್ಟಿದ್ದರಾ’’ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ ಬಂದ್ ಕೇವಲ ರಾಜಕೀಯ ಸ್ಟಂಟ್
ಮಂಡ್ಯ ಪ್ರಗತಿಪರ ಜಿಲ್ಲೆಯಾಗಿದೆ, ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಮಾಡಿಕೊಡಬಾರದು. ಮಂಡ್ಯ ಜನರು ಸೌಹಾರ್ದ, ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಕಾಂಗ್ರೆಸ್ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಪಕ್ಷ ಜಾತಿ, ಧರ್ಮದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಎಚ್.ಸಿ. ಮಹದೇವಪ್ಪ ಹೇಳಿದರು.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…