ರಾಜ್ಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಎಚ್‌ಸಿಎಂ ಸ್ಪಷ್ಟನೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಸ್ಪರ್ಧಿಸುವುದು ಇಲ್ಲ. ಯಾವುದೇ ಅಭ್ಯರ್ಥಿಯಾದರೂ ಸಹಾ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸಿದ್ಧತೆ ನಡೆಯುತ್ತಿದೆ. ಮಂತ್ರಿಗಳು ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆಯಾಗಿಲ್ಲ. ಚುನಾವಣೆಗೆ ಮಂತ್ರಿಗಳು ಸ್ಪರ್ಧಿಸಬೇಕೆಂಬ ಒತ್ತಾಯವಿಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭ್ಯರ್ಥಿಗಳ ಆಯ್ಕೆಯಾಗಲಿದೆ. ನಾನು ಅಭ್ಯರ್ಥಿಯಲ್ಲ. ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ನನ್ನ ಮಗ ಸುನಿಲ್ ಬೋಸ್ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ. ಸುನಿಲ್ ಬೋಸ್ ಗೆ 3 ಬಾರಿ ಎಂಎಲ್‌ಎ ಚುನಾವಣೆ ಟಿಕೆಟ್ ಕೈ ತಪ್ಪಿದ್ದರು ಎಲ್ಲಾ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಗೆಲ್ಲಿಸಲು ಶ್ರಮಿಸಿದ್ದಾನೆ. ನನ್ನ ಮಗನಿಗೇ ಟಿಕೆಟ್ ಕೊಡಿ ಎಂದು ನಾನು ಶಿಫಾರಸ್ಸು ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ವರಿಷ್ಠರ ತೀರ್ಮಾನ ಅಂತಿಮವಾಗಲಿದೆ ಎಂದರು.

ಇದೇ ವೇಳೆ ಮಾಂಸಹಾರ ಸೇವಿಸಿ ಸುತ್ತೂರಿಗೆ ಕಾಂಗ್ರೆಸ್ ನಾಯಕರು ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಮಾಂಸ ಸಾರು ಬಡಿಸಿದ್ರಾ? ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತಾಡ್ತಿದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ? ಮರಿ, ಮಾಂಸ ತಂದಿದ್ರಾ? ಲಿವರ್ ಫ್ರೈ ಮಾಡಿ ಕೊಟ್ಟಿದ್ದರಾ’’ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ ಬಂದ್ ಕೇವಲ ರಾಜಕೀಯ ಸ್ಟಂಟ್
ಮಂಡ್ಯ ಪ್ರಗತಿಪರ ಜಿಲ್ಲೆಯಾಗಿದೆ, ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಮಾಡಿಕೊಡಬಾರದು. ಮಂಡ್ಯ ಜನರು ಸೌಹಾರ್ದ, ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಕಾಂಗ್ರೆಸ್ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಪಕ್ಷ ಜಾತಿ, ಧರ್ಮದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಎಚ್.ಸಿ. ಮಹದೇವಪ್ಪ ಹೇಳಿದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

44 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

46 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

48 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

51 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

56 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago