ಮಂಡ್ಯ : ನಿಮ್ಮ ಅಸೆಯನ್ನು ನಾನು ನಿರಾಸೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳುವ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯ ವಿಚಾರದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ.
ನಗರದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಕುತಂತ್ರ ರಾಜಕಾರಣದಿಂದ ಸೋಲಿಸಲಾಯಿತು. ಆದರೆ ಆ ಸೋಲನ್ನು ಇಂದಿಗೂ ನಾನು ಒಪ್ಪುವುದಿಲ್ಲ ಎಂದು ಹೇಳಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಬಗ್ಗೆ ನಾನು ಕೂಲಂಕುಶವಾಗಿ ಪರಿಶೀಲಿಸಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಬಳಿಕ, ಯಾವುದೇ ಕಾರಣಕ್ಕು ಪಕ್ಷದ ಕಾರ್ಯಕರ್ತರ ಆಸೆಯನ್ನು ನಿರಾಸೆ ಮಾಡುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.





