ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಂಗ್ರೆಸ್‌ಗೆ ಸಮಾಧಾನ ತಂದಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದರು.
ಈ ಹಿಂದೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಮೇಲೂ ಬಲ ಪ್ರಯೋಗಿಸಬೇಕಿತ್ತು. ಕೇವಲ ಸಿದ್ದರಾಮಯ್ಯ ಅವರ ಮೇಲೆ ಬಲ ಪ್ರಯೋಗಿಸಲಾಗಿದೆ. ಸಿದ್ದರಾಮಯ್ಯರ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಅಪಾದನೆ ಇರಲಿಲ್ಲ. ಆದರೆ ಈ ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿರುವುದು ತುಂಬಾ ನೋವುಂಟು ಮಾಡಿದೆ. ಹೀಗಾಗಿ ನಾವು ಮುಂದೆ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.