ರಾಜ್ಯ

ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿ ಅನ್ನು ಕೇಂದ್ರ ಮರಳಿ ನೀಡುವುದೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ, ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.

ಇದನ್ನು ಓದಿ : ಸಮಾಜದಲ್ಲಿ ಅಸಮಾನತೆ ಬಯಸುವ ಬಿಜೆಪಿ : ಸಿಎಂ ಸಿದ್ದರಾಮಯ್ಯ ಟೀಕೆ

ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ
ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.

ಅಕ್ಟೋಬರ್ 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ
ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷೆಯಲ್ಲಿ ಜಾತಿವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ
ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕಾರಣಕ್ಕಾಗಿ ಆರೋಪ
ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

14 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

30 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

1 hour ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago