ರಾಜ್ಯ

ಸೌಜನ್ಯ ಕೇಸ್‌ ತನಿಖೆಗೆ ಮುಂದಾಯ್ತಾ ಎಸ್‌ಐಟಿ? ಆರೋಪ ಹೊತ್ತವರಿಗೆ ಬುಲಾವ್‌

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಈ ಹಿಂದೆ ಸಿಬಿಐನಿಂದ ಕ್ಲೀನ್‍ಚಿಟ್ ಪಡೆದಿದ್ದ ಆರೋಪಿಗಳನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಪುನಃ ತನಿಖೆಗೆ ಒಳಪಡಿಸಿದೆ.
ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಉದಯ್‍ಕುಮಾರ್ ಜೈನ್, ಧೀರಜ್ ಕೆಲ್ಲಾ ಮತ್ತು ಮಲ್ಲಿಕ ಜೈನ್ ಅವರುಗಳಿಂದ ಬೆಳ್ತಂಗಡಿಯ ಎಸ್‍ಐಟಿ ಕಚೇರಿಯಲ್ಲಿ ಮಾಹಿತಿ ಪಡೆಯಲಾಗಿದೆ.

ಇತ್ತೀಚೆಗಷ್ಟೇ ಸೌಜನ್ಯ ತಾಯಿ ಎಸ್‍ಐಟಿಗೆ ದೂರು ನೀಡಿ ತಮ ಮಗಳ ಕೊಲೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮೂವರನ್ನು ವಿಚಾರಣೆಗೆ ಗುರಿಪಡಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್

ಪ್ರಕರಣದ ಹಿನ್ನೆಲೆ:
2012ರ ಅಕ್ಟೋಬರ್‍ನಲ್ಲಿ ಸೌಜನ್ಯ ಕಾಲೇಜಿನಿಂದ ಮನೆಗೆ ತೆರಳುವಾಗ ಕಾಣೆಯಾಗಿದ್ದರು. ಮರುದಿನ ಅವರ ಮೃತದೇಹ ಧರ್ಮಸ್ಥಳದ ಬಳಿಯ ಪಾಂಗಲದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಬೆಳ್ತಂಗಡಿ ಪೊಲೀಸರು ಆರಂಭಿಕ ತನಿಖೆ ನಡೆಸಿದ್ದು, ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ನಂತರ ಈ ಪ್ರಕರಣವನ್ನು ಸಿಐಡಿ ಮತ್ತು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ಆದರೆ 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್‍ನನ್ನು ಸಾಕ್ಷ್ಯಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿತ್ತು. ತನಿಖೆಯಲ್ಲಿ ಲೋಪದೋಷಗಳಿವೆ ಎಂದು ನ್ಯಾಯಾಲಯ ಟೀಕಿಸಿತ್ತು. ಇದರಿಂದ ಸೌಜನ್ಯ ಕುಟುಂಬಸ್ಥರು ಮತ್ತು ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಈಗ ಎಸ್‍ಐಟಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಉದಯ್ ಜೈನ್ ಸೇರಿದಂತೆ ಆರೋಪಿತರನ್ನು ವಿಚಾರಣೆಗೊಳಪಡಿಸಿದೆ. ಉದಯ್ ಜೈನ್ ಅವರಿಗೆ ಎಸ್‍ಐಟಿ ಕರೆ ಮಾಡಿ ಇಂದು ಬೆಳ್ತಂಗಡಿ ಕಚೇರಿಗೆ ಬರಲು ಸೂಚಿಸಿತ್ತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ವಿಚಾರಣೆಗೆ ಸಿದ್ಧನಿದ್ದೇನೆ. ಸತ್ಯವನ್ನು ಹೇಳುವವರಿಗೆ ಭಯವಿಲ್ಲ, ಸುಳ್ಳು ಹೇಳುವವರಿಗೇ ಭಯ ಇರುತ್ತದೆ ಎಂದು ಹೇಳಿದರು. ತಾವು ಈಗಾಗಲೇ ಸಿಬಿಐ ತನಿಖೆಯಲ್ಲಿ ಭಾಗಿಯಾಗಿದ್ದು, ಡಿಎನ್‍ಎ, ಬ್ರೈನ್ ಮ್ಯಾಪಿಂಗ್, ಮತ್ತು ಪಾಲಿಗ್ರಾಫ್ ಪರೀಕ್ಷೆಗಳಿಗೆ ಒಳಗಾಗಿದ್ದೇವೆ ಎಂದು ಒತ್ತಿ ಹೇಳಿದರು.

ಇನ್ನೊಮೆ ಬ್ರೈನ್ ಮ್ಯಾಪಿಂಗ್ ಮಾಡಲಿ, ನಾನು ಸಿದ್ಧನಿದ್ದೇನೆ. ಸಾಯುವವರೆಗೂ ತನಿಖೆಗೆ ತಯಾರಾಗಿದ್ದೇನೆ ಎಂದು ಉದಯ್ ಜೈನ್ ತಮ ನಿರಪರಾಧಿತ್ವವನ್ನು ಸಮರ್ಥಿಸಿಕೊಂಡರು. ಅವರು ಸೌಜನ್ಯ ಕುಟುಂಬದ ತಾಯಿಯ ಬಗ್ಗೆ ಗೌರವ ವ್ಯಕ್ತಪಡಿಸಿದರು ಕೂಡ ಕುಟುಂಬವು ತಮನ್ನು ಬಾಣವಾಗಿ ಬಳಸಿಕೊಂಡು ತಮ ಖ್ಯಾತಿಗೆ ಕಳಂಕ ತಂದಿದೆ ಎಂದು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

15 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

22 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

49 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

2 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago