Mysore
24
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ಮುಂದಿನ ಲೋಕಸಭಾ ಚುನಾವಣೆಯಲ್ಲೂ ರಾಘವೇಂದ್ರ ಅವರನ್ನು ಗೆಲ್ಲಿಸಿ : ಶಾಮನೂರು ಶಿವಶಂಕರಪ್ಪ!

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.

ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ , ಮುಂದೆಯೂ ಇವರನ್ನೇ ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದರು.

ಬಿ.ವೈ ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನು ಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ.

ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!