ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ನಿರ್ಧರಿಸಲಾಯಿತು.
ಇದನ್ನು ಓದಿ: ಚಳಿಗಾಲದ ಅಧಿವೇಶನದಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ.?
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಇದನ್ನು ಅಧಿಕೃತವಾಗಿ ಪ್ರಕಟಿಸಿದರು. ಸಂಪುಟದ ತೀರ್ಮಾನವನ್ನು ರಾಜ್ಯಪಾಲ ಚಂದ್ ಅವರ ಗಮನಕ್ಕೆ ತರಲಾಗುವುದು ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಎರಡು ವಾರಗಳ ಕಾಲ ನಡೆಯಲಿದೆ ಎಂದು ತಿಳಿಸಿದರು.





