ಬೆಂಗಳೂರು: ನಾನು ಯಾವುದೇ ತನಿಖೆಗೂ ಸಿದ್ಧ, ಯಾವ ತನಿಖೆಗೂ ಹೆದರಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವಿಟ್ ಮಾಡಿರುವ ಅವರು, ತಮ್ಮದೇನೂ ತಪ್ಪಿಲ್ಲದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ? ಈ ರೀತಿ ಅಡ್ಡದಾರಿ ಹುಡುಕಿ ಅನಿವಾರ್ಯವಾದದ್ದನ್ನ ಮುಂದೂಡಿ ರಾಜ್ಯದ ಜನರ ಮುಂದೆ ಇನ್ನಷ್ಟು ಸಣ್ಣವರಾಗುವ ಬದಲು, ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ಸಲಹೆಗಾರರು, ವಕೀಲರು, ಸುತ್ತ ಮುತ್ತ ಇರುವ ಹಿತಶತೃಗಳು ಈಗಾಗಲೇ ನಿಮ್ಮ ದಾರಿ ತಪ್ಪಿಸಿ ಮರ್ಯಾದೆ ಕಳೆದಿದ್ದಾರೆ. ಈಗ ಮತ್ತೊಮ್ಮೆ ಅವರನ್ನು ನಂಬಿ ತಪ್ಪು ಹೆಜ್ಜೆ ಇಡಬೇಡಿ. ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಒಂದೇ ತಮ್ಮ ಮುಂದಿರುವ ಏಕೈಕ ದಾರಿ ಎಂದು ಹೇಳಿದ್ದಾರೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…