Mysore
25
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

Basava Jayamruthyunjaya Swamiji’s health condition varies

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ತಮ್ಮ ಮೇಲೆ ಸ್ವಾಮೀಜಿಯು ಲೈಂಗಿಕ ದೌರ್ಜನ್ಯ ಎಸಗಿದ್ದು, ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಸಂತ್ರಸ್ತ ಮಹಿಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಸ್ವಾಮೀಜಿಯು ಕೂಡ ಮಹಿಳೆ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.
ದೂರು ಸ್ವೀಕಾರ ಮಾಡಿದ ಮಹಿಳಾ ಆಯೋಗ ಬಳಿಕ ಮಹಿಳೆ ಹೆಸರು, ದೂರವಾಣೆ ಸಂಖ್ಯೆ ಸರಿಯಾಗಿ ಕೊಡುವಂತೆ ಹೇಳಿದೆ. ನಂತರ ಆ ವ್ಯಕ್ತಿ ಬೇರೆ ದೂರವಾಣಿ ಸಂಖ್ಯೆ ನೀಡಿ ತೆರಳಿದ್ದಾರೆ. ಈ ಬಗ್ಗೆ ಸತ್ಯಾತ್ಯತೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮಹಿಳಾ ಆಯೋಗ ತಿಳಿಸಿದೆ.

Tags:
error: Content is protected !!