ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್ ಎಂದು ಗುರುತಿಸಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹಬ್ಬಗೋಡಿ ಠಾಣೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಹುಲಿಮಂಗಲದ ಪೋಡು ಬಳಿಯ ಶೆಡ್‌ನಲ್ಲಿ ಈಕೆ ವಾಸವಿದ್ದಳು. ಭಾರತ್ ಮಾತಾ ಕಿ ಜೈ ಘೋಷಣೆ ವೇಳೆ ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿದೆ. ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡುವಾಗ ಸ್ಥಳೀಯ ವ್ಯಕ್ತಿಯೊಬ್ಬ ವಿಡಿಯೋ ಮಾಡುತ್ತಿದ್ದನು.
ಈ ವೇಳೆ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.




