ರಾಜ್ಯ

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್‌ ಎಂದು ಗುರುತಿಸಲಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಹಬ್ಬಗೋಡಿ ಠಾಣೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಹುಲಿಮಂಗಲದ ಪೋಡು ಬಳಿಯ ಶೆಡ್‌ನಲ್ಲಿ ಈಕೆ ವಾಸವಿದ್ದಳು. ಭಾರತ್‌ ಮಾತಾ ಕಿ ಜೈ ಘೋಷಣೆ ವೇಳೆ ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿದೆ. ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡುವಾಗ ಸ್ಥಳೀಯ ವ್ಯಕ್ತಿಯೊಬ್ಬ ವಿಡಿಯೋ ಮಾಡುತ್ತಿದ್ದನು.

ಈ ವೇಳೆ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾಳೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…

4 mins ago

ಗುಂಡ್ಲುಪೇಟೆ: ದಾರಿತಪ್ಪಿ ಬಂದಿದ್ದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.…

13 mins ago

ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…

28 mins ago

ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

38 mins ago

ಲಾಲ್‌ಬಾಗ್‌ನಲ್ಲಿ ನಾಳೆಯಿಂದ ಫ್ಲವರ್‌ ಶೋ: ಇದು ಈ ಬಾರಿಯ ವೈಶಿಷ್ಟ್ಯತೆ

ಬೆಂಗಳೂರು: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಫುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ…

50 mins ago

ಮಂಡ್ಯ| ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದವನಿಗೆ 6 ತಿಂಗಳು ಜೈಲು

ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್‌ ಅಕೀಲ್‌…

54 mins ago