Mysore
23
overcast clouds
Light
Dark

ಮಹಿಳೆ ಅಪಹರಣ ಪ್ರಕರಣ: ಎಚ್‌ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಎರಡು ಜನರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು  ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು  ಎಂಬ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆ ಶಾಸಕ ಎಚ್.ಡಿ ರೇವಣ್ಣ ನಾಳೆ(ಮೇ.೧೪) ಬಿಡುಗಡೆಯಾಗುವ ಸಾಧ್ಯತೆಯಿದೆ.

ಅರ್ಜಿದಾರರ ಪರ ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ ನಾಗೇಶ್‌ ಹಾಗೂ ಎಸ್‌ಐಟಿ ಪರ ಹೈಕೋರ್ಟ್‌ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್‌ ನಾಯಕ್‌ ವಾದ ಮಂಡಿಸಿದರು.