ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇಂದು (ಮೇ.೧೩) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಎರಡು ಜನರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆ ಶಾಸಕ ಎಚ್.ಡಿ ರೇವಣ್ಣ ನಾಳೆ(ಮೇ.೧೪) ಬಿಡುಗಡೆಯಾಗುವ ಸಾಧ್ಯತೆಯಿದೆ.
ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ.ವಿ ನಾಗೇಶ್ ಹಾಗೂ ಎಸ್‌ಐಟಿ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…