ರಾಜ್ಯ

ಮಹಿಳಾ ಸಿಎಂ ಹೇಳಿಕೆ| ವೈರಲ್‌ ವಿಡಿಯೋ ಬಗ್ಗೆ ಗರಂ ಆದ ಸಚಿವೆ ಲಕ್ಷ್ಮೀ ಹೆಬ್ಬಳಕರ್‌

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಬಾರಿ ಸದ್ದು ಮಾಡುತ್ತಿದೆ. ಈ ಮಧ್ಯೆ ಮಹಿಳಾ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳ ಹೇಳಿಕೆ ಕೂಡ ವೈರಲ್‌ ಆಗಿತ್ತು.  ಸದ್ಯ  ಈ ವದಂತಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕೋಡಿಮಠದ ಶ್ರೀಗಳ ಹೇಳಿಕೆ ಹಾಗೂ ವೈರಲ್‌ ವಿಡಿಯೋ ಬಗ್ಗೆ ಗರಂ ಆಗಿದ್ದು, ಅದೆಲ್ಲಾ ನಗಣ್ಯ ಎಂದಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ  ಎಂದರು.

ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಮ್ಮ ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದು ಸಚಿವರು ಹೇಳಿದರು.

ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನ ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

46 mins ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

55 mins ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

1 hour ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

1 hour ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

12 hours ago