ರಾಜ್ಯ

ಮಹಿಳಾ ಸ್ನೇಹಿ ಗ್ರಾ.ಪಂ ಅಭಿಯಾನ | ಮಾ.8 ರ ಮಹಿಳಾ ದಿನದಂದು ಚಾಲನೆ ; ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್‌ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸಚಿವರು ಹೇಳಿದ್ದಾರಲ್ಲದೆ, ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದ್ದಾರೆ.

ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ನಡೆಸುವ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಉಪ ಸಮಿತಿಗಳ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ, ಪ್ರತಿ ಗ್ರಾಮದ ಮಹಿಳೆಯರ ಅಂಕಿ-ಸಂಖ್ಯೆಯ ವಿವರಗಳನ್ನು ಸಂಗ್ರಹಿಸಿ ಮಹಿಳಾ ಗ್ರಾಮಸಭೆಯಲ್ಲಿ ಮಂಡಿಸಬೇಕು ಗ್ರಾಮಗಳಲ್ಲಿನ ಎಲ್ಲಾ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಎಲ್ಲಾ ಸದಸ್ಯರು ಮಹಿಳಾ ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಖಾತರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.

ಮಹಿಳಾಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ 16 ವಾರಗಳ ಅವಧಿಯಲ್ಲಿ ವಾರಕ್ಕೊಂದರಂತೆ ಸಾಂಸ್ಕೃತಿಕ, ಮನರಂಜನೆ, ಕ್ರೀಡೆ, ಆರೋಗ್ಯ, ಪೌಷ್ಟಿಕಾಂಶ, ನೈರ್ಮಲ್ಯ, ಮಹಿಳಾ ಕಾನೂನುಗಳು ಮುಂತಾದ ವಿಷಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸಲು ಸಚಿವರು ಸೂಚಿಸಿದ್ದಾರೆ. ಗ್ರಾಮಸಭೆ ನಡೆಸುವ ಸಮಯದಲ್ಲಿ ಆರೋಗ್ಯ ಶಿಬಿರ, ವಸ್ತು ಪ್ರದರ್ಶನ, ಸಸಿ ನೆಡುವ ಕಾರ್ಯಕ್ರಮ ಏರ್ಪಾಡು ಮಾಡಲು ಸಚಿವರು ಸಲಹೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

13 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

19 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

30 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago