ರಾಜ್ಯ

ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ ; ಸಚಿವೆ ಹೆಬ್ಬಾಳಕರ್

  • ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
  • ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, ವೃದ್ಧರ ಹೀಗೆ..ಎಲ್ಲರಿಗೂ ಸಲ್ಲುವ ಪಕ್ಷ ಕಾಂಗ್ರೆಸ್ ಪಕ್ಷ ಎಂದರು.

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.‌

ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ‌ ರೆಡ್ಡಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಮುಖಂಡರಾದ ಜಲಜಾ ನಾಯ್ಕ್, ಮಂಜುಳಾ ನಾಯ್ಡು, ಪುಷ್ಪ ಅಮರ್ ನಾಥ್ ಸೇರಿದಂತೆ ನೂರಾರು ಸಂಖ್ಯೆಯ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

54 mins ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

56 mins ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

58 mins ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

1 hour ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

1 hour ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

1 hour ago