Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಗೃಹಲಕ್ಷ್ಮಿ ಹಣ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗುತ್ತದೆ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಗೃಹಲಕ್ಷ್ಮೀ  ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್‌ ತಿಂಗಳ ಹಣ ಈಗಾಗಲೇ ಟ್ರೆಷರಿಗೆ  ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್‌ ಗೆ ಕ್ರೆಡಿಟ್‌ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

ಪ್ರತಿ ಮನೆಯ ಯಜಮಾನಿಯ ಬ್ಯಾಂಕ್‌  ಖಾತೆಗೆ ಪ್ರತಿ ತಿಂಗಳು ೨೦೦೦ ಸಾವಿರ ರೂಪಾಯಿ ವರ್ಗಾವಣೆ ಮಾಡುವ ಗೃಹ ಲಕ್ಷ್ಮೀ ಯೋಜನೆ  ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಯಾಗುತ್ತಿತ್ತು. ಮಹಿಳೆಯರು ಕೂಡ ಗೃಹಲಕ್ಷ್ಮೀ ಹಣ ಬರುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದು,  ಮೇ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲರ ಅಕೌಂಟ್‌ ಗೆ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷವೂ ಅಧಿಕಾರ ನಡೆಸುತ್ತದೆ ಜೊತೆಗೆ ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ಹೇಳಿದ್ದಾರೆ.

Tags:
error: Content is protected !!