ಬೆಳಗಾವಿ : ಗೃಹಲಕ್ಷ್ಮೀ ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್ ಗೆ ಕ್ರೆಡಿಟ್ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ೨೦೦೦ ಸಾವಿರ ರೂಪಾಯಿ ವರ್ಗಾವಣೆ ಮಾಡುವ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಯಾಗುತ್ತಿತ್ತು. ಮಹಿಳೆಯರು ಕೂಡ ಗೃಹಲಕ್ಷ್ಮೀ ಹಣ ಬರುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಮೇ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲರ ಅಕೌಂಟ್ ಗೆ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷವೂ ಅಧಿಕಾರ ನಡೆಸುತ್ತದೆ ಜೊತೆಗೆ ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ಹೇಳಿದ್ದಾರೆ.
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…