ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ವಿಧಿವಶರಾಗಿದ್ದಾರೆ.
ಲೀಲಾವತಿ ಬೈಪಾಡಿತ್ತಾಯ ಅರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ, ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಲೀಲಾವತಿ ಬೈಪಾಡಿತ್ತಾಯ ಅವರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾಗಿದ್ದರು.
ಲೀಲಾವತಿ ಬೈಪಾಡಿತ್ತಾಯ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ 2010ರಲ್ಲಿ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತು. 2012ರಲ್ಲಿ ಕರ್ನಾಟಕ ಸರ್ಕಾರ ನೀಡುವ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.





