ರಾಜ್ಯ

ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಲಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಶೇ.33ರಷ್ಟು ಮಹಿಳಾ ಮೀಸಲಾತಿ ಫಲವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇಂದು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾವರಣೆʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಎಲ್ಲಾ ಯೋಜನೆಗಳು, ಬಿ.ಎಸ್‌.ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಗಳು ಮಹಿಳಾ ಪ್ರಧಾನವಾಗಿವೆ ಎಂದು ಹೇಳಿದರು.

ಬಿಜೆಪಿ ಪಕ್ಷದಲ್ಲಿ ಮಾತ್ರ ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನತೆ ಸಿಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸಚಿವೆ ನಿರ್ಮಲಾ ಸೀತಾರಾಮನ್‌ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಆದ ಕಾರಣ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಿಜೆಪಿಯತ್ತ ವಾಲುತ್ತಿದ್ದಾರೆ ಎಂದು ತಿಳಿಸಿದರು.

ಈ ಸಮಯದಲ್ಲಿ ಮಹಿಳಾ ಸಾಧಕಿಯರನ್ನು ಸನ್ಮಾನಿಸಲಾಯಿತು. ರಾಜ್ಯಸಭಾ ಸದಸ್ಯ ಲಹರ್‌ ಸಿಂಗ್‌ ಸಿರೋಯಾ, ರಾಜ್ಯ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ಭಟ್‌, ಪೂರ್ಣಿಮಾ ಪ್ರಕಾಶ್‌, ವಸುಧಾ ಕುಲಕರ್ಣಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

9 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

9 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

10 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

10 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

10 hours ago