ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಶೇ.33ರಷ್ಟು ಮಹಿಳಾ ಮೀಸಲಾತಿ ಫಲವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇಂದು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾವರಣೆʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಎಲ್ಲಾ ಯೋಜನೆಗಳು, ಬಿ.ಎಸ್.ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಗಳು ಮಹಿಳಾ ಪ್ರಧಾನವಾಗಿವೆ ಎಂದು ಹೇಳಿದರು.
ಬಿಜೆಪಿ ಪಕ್ಷದಲ್ಲಿ ಮಾತ್ರ ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನತೆ ಸಿಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಆದ ಕಾರಣ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಿಜೆಪಿಯತ್ತ ವಾಲುತ್ತಿದ್ದಾರೆ ಎಂದು ತಿಳಿಸಿದರು.
ಈ ಸಮಯದಲ್ಲಿ ಮಹಿಳಾ ಸಾಧಕಿಯರನ್ನು ಸನ್ಮಾನಿಸಲಾಯಿತು. ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ರಾಜ್ಯ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ಭಟ್, ಪೂರ್ಣಿಮಾ ಪ್ರಕಾಶ್, ವಸುಧಾ ಕುಲಕರ್ಣಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…