ರಾಜ್ಯ

ಜವಾಬ್ದಾರಿಯಿಂದ ಕೆಲಸ ಮಾಡಿ; ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ

ಧಾರವಾಡ : ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ಸಚಿವರು ತಿಳಿಸಿದರು.

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವರು, ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ಭಾಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಅವರು ಹೇಳಿದರು..

ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಫಾಸ್ಪರಿಕ್ ಆಮ್ಲದ ಬೆಲೆ ಹೆಚ್ಚಿರುವುದರಿಂದ, ಡಿಎಪಿಗೆ ಪರ್ಯಾಯಾವಾಗಿ ಕಾಂಪ್ಲೆಕ್ಸ್ ಗೊಬ್ಬರ, 15 15 15, 17 17 17 ಹಾಗೂ 19 19 19 ಪರ್ಯಾಯಾವಾಗಿ ಎಲ್ಲಾ ಬೆಳೆಗಳಿಗೂ ಉಪಯೋಗಿಸಬೇಕು. ಪೊಟಾಷ್ ಇರುವುದರಿಂದ ಸಮತೋಲನ ಗೊಬ್ಬರ ಒದಗಿಸಲಿದ್ದು, ಪೊಟಾಷ್ ನಿಂದ ಬೆಳೆಗಳಿಗೆ ರೋಗ, ಕೀಟ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಣ್ಣಿನ ಫಲವತ್ತತೆ ಸಹ ಕಾಪಾಡಿ ಸಮತೋಲನದಲ್ಲಿ ಬೆಳೆಗಳಿಗೆ ಪೋಷಾಕಾಂಶ ಒದಗಿಸುತ್ತದೆ ಈ ಹಿನ್ನಲೆಯಲ್ಲಿ ರೈತರಿಗೆ ಪರ್ಯಾಯ ಗೊಬ್ಬರದ ಬಗ್ಗೆ ಪ್ರಚಾರ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಯಾಂತ್ರೀಕರಣ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು, ಹೊಸ ತಳಿಗಳ ಪ್ರಯೋಜನದ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಹಾಗೂ ಹಾರ್ವೇಸ್ಟರ್ ಹಬ್ ಗಳನ್ನು ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಠಾನಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಮಣ್ಣಿನ ಪರೀಕ್ಷೆ ಅತ್ಯಂತ ಮುಖ್ಯವಾದದ್ದು, ಇದನ್ನು ಹೆಚ್ಚಾಗಿ ಅನುಷ್ಠಾನ ಮಾಡಿ ರಾಸಾಯನಿಕಗಳ ಮಿತ ಬಳಕೆ ಹಾಗೂ ನ್ಯಾನೋ ಗೊಬ್ಬರ ಬಳಕೆ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಿ ಎಂದು ಅವರು ಸೂಚಿಸಿದರು.

ಎಲ್ಲಾ ಅಧಿಕಾರಿಗಳು ರೈತರ ಬಳಿ ಹೋಗಿ ಸಮಸ್ಯೆ ಆಲಿಸಬೇಕು, ಕೃಷಿಕರ ಜಮೀನುಗಳಿಗೆ ಭೇಟಿ ನೀಡದ ,ಅವರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವರು ಎಚ್ಚರಿಕೆ ನೀಡಿದರು.

ಬೆಳೆ ವಿಮೆ, ಕಬ್ಬಿನಲ್ಲಿ ಗೊಣ್ಣೆಹುಳ ನಿರ್ವಹಣೆ, ಶೇಂಗಾ ಬೆಳೆಯಲ್ಲಿ ಲಘು ಪೋಷಕಾಂಶಗಳ ಬಳಕೆ , ತೊಗರಿ ಬೆಳೆಯಲ್ಲಿ ಇಳುವರಿ ಹೆಚ್ಚಳ ತಾಂತ್ರಿಕತೆಯ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವಂತೆ ಸಚಿವರು ನಿರ್ದೇಶನ ನೀಡಿದರು..

ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲವಾಗದಂತೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಿದ ಸಚಿವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ವ್ಯವಸ್ಥಿತ ಹಂಚಿಕೆಗೆ ನಿರ್ದೇಶಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶಕ ವೆಂಕಟರಮಣರೆಡ್ಡಿ ಉಪಸ್ಥಿತರಿದ್ದರು..

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago