ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯರ ಅನುಭವದ ಜೊತೆ ಯುವಕರ ಉತ್ಸಾಹ ಸೇರಿದರೆ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದು ಅವರು ವಿಶ್ಲೇಷಿಸಿದರು. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದು ಅವರು ನುಡಿದರು.
ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಮಹನೀಯರನ್ನು ನೆನಪಿಸಿಕೊಂಡರು. 1980ರಲ್ಲಿ ಆರಂಭವಾದ ನಮ್ಮ ಪಕ್ಷದ ಪ್ರಯಾಣ ಜನರ ಆಶೀರ್ವಾದ ಮತ್ತು ನಿಮ್ಮ ಬೆಂಬಲದಿಂದ ಇವತ್ತು ಬಲಿಷ್ಠ ಮತ್ತು ಇಷ್ಟು ಎತ್ತರಕ್ಕೆ ಬೆಳೆದಿದೆ ಎಂದು ಅವರು ತಿಳಿಸಿದರು. ಜನರೇ ನಮ್ಮ ದೇವರು, ಜನಸೇವೆಯೇ ನಮ್ಮ ಕಾಯಕ. ಅವರ ಮುಂದೆ ನಾವು ನಮ್ರವಾಗಿ ಇರಬೇಕು ಎಂದು ಸೂಚಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮ, ಅಡ್ವಾಣಿಯವರ ಸಂಘಟನಾ ಶಕ್ತಿ ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿದೆ. ಪಕ್ಷದ ಬೆಳವಣಿಗೆಗೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ವಿವರಿಸಿದರು. ಪಕ್ಷದ ಜಿಲ್ಲಾ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…