ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಒಂದೆಡೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂಬ ಕೂಗು ಕೇಳಿಬರುವ ಮಧ್ಯೆ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಇರುವ ʻಶಕ್ತಿʻ ಯೋಜನೆ ವಿಶ್ವ ದಾಖಲೆ ಮಾಡಿದೆ.
ಶಕ್ತಿ ಯೋಜನೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ (ಎಲ್‌ಬಿಡಬ್ಲ್ಯೂಆರ್) ನಿರ್ಮಿಸಿದ್ದು, ಅಧಿಕೃತವಾಗಿ ಪ್ರಮಾಣಪತ್ರ ಸಿಕ್ಕಿದೆ. ಈ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಪಡೆದಿರುವ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳ ಸಂಖ್ಯೆ ೫೬೪.೧೦ ಕೋಟಿ ಎಂದು ದಾಖಲಾಗಿದೆ. ಈ ಸಾಧನೆಯನ್ನು ಗಮನಿಸಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ ನೀಡಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಇದರ ಜೊತೆಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಶ್ವದಲ್ಲೇ ಅತಿ ಹೆಚ್ಚು ಪ್ರಶಸ್ತಿ ಪಡೆದ ರಸ್ತೆ ಸಾರಿಗೆ ನಿಗಮವೆಂದು ಗುರುತಿಸಲ್ಪಟ್ಟಿದೆ. ೧೯೯೭ರಿಂದ ಇಲ್ಲಿಯವರೆಗೆ ೪೬ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳು ಸಿಕ್ಕಿವೆ. ಈ ಎರಡು ದಾಖಲೆಗಳು ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ.
ಸಿಹಿಸುದ್ದಿ ಹಂಚಿಕೊಂಡ ಸಿದ್ದರಾಮಯ್ಯ
ಎಲ್‌ಬಿಡಬ್ಲ್ಯೂಆರ್ ಪ್ರಮಾಣೀಕರಿಸಿದ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ೫೬೪.೧೦ ಕೋಟಿ ಪ್ರಯಾಣಗಳನ್ನು ಮಾಡಿದ್ದಾರೆ. ಇದು ಅವರ ದೈನಂದಿನ ಚಲನಶೀಲತೆಯನ್ನು ಬಲಪಡಿಸುತ್ತದೆ. ಕೆಎಸ್‌ಆರ್‌ಟಿಸಿಯು ೪೪ ಪ್ರಶಸ್ತಿಗಳೊಂದಿಗೆ ಸಾರ್ವಜನಿಕ ಸೇವೆಯಲ್ಲಿ ಮುಂದುವರಿದಿದೆ‘ ಎಂದು ಹೇಳಿದ್ದಾರೆ.
ಈ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ದೊಡ್ಡ ನೆರವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಿ, ಕೆಲಸ, ಶಿಕ್ಷಣ ಮತ್ತು ಇತರ ಕಾರ್ಯಗಳನ್ನು ಸುಲಭವಾಗಿ ಮಾಡುತ್ತಿದ್ದಾರೆ. ಇದರಿಂದ ಅವರ ಆರ್ಥಿಕ ಭಾರ ಕಡಿಮೆಯಾಗಿದೆ ಮತ್ತು ಸ್ವಾವಲಂಬನೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…