Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ: ಸಚಿವ ಈಶ್ವರ್‌ ಖಂಡ್ರೆ

esAhwar khandre (2)

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸುವಂತೆ ಮನವಿ ಮಾಡಿದರು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಪಿಓಪಿ ಗೌರಿ ಗಣೇಶ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಜೊತೆಗೆ ಅದಕ್ಕೆ ಲೇಪಿಸುವ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ನೀರಲ್ಲಿ ಕರಗಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ ಎಂದು ಹೇಳಿದರು.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಪಟ್ಟಣ, ನಗರಗಳಲ್ಲಿ ಸಮುಚ್ಚಯಗಳಿವೆ. ಇವುಗಳಲ್ಲಿ ಸಂಘಗಳು ಇರುತ್ತವೆ. ಅವರಿಗೆ ಮನವಿ ಮಾಡಿ ಮಣ್ಣಿನ ಗಣಪ ಪೂಜಿಸುವಂತೆ ಎಲ್ಲರಿಗೂ ಸಂದೇಶ ಕಳಿಸುವಂತೆ ಮತ್ತು ಶಾಲಾ, ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿ ಪೂಜಿಸುವ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ ಎಂದರು.

Tags:
error: Content is protected !!