esAhwar khandre (2)
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸುವಂತೆ ಮನವಿ ಮಾಡಿದರು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಪಿಓಪಿ ಗೌರಿ ಗಣೇಶ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಜೊತೆಗೆ ಅದಕ್ಕೆ ಲೇಪಿಸುವ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ನೀರಲ್ಲಿ ಕರಗಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ ಎಂದು ಹೇಳಿದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಪಟ್ಟಣ, ನಗರಗಳಲ್ಲಿ ಸಮುಚ್ಚಯಗಳಿವೆ. ಇವುಗಳಲ್ಲಿ ಸಂಘಗಳು ಇರುತ್ತವೆ. ಅವರಿಗೆ ಮನವಿ ಮಾಡಿ ಮಣ್ಣಿನ ಗಣಪ ಪೂಜಿಸುವಂತೆ ಎಲ್ಲರಿಗೂ ಸಂದೇಶ ಕಳಿಸುವಂತೆ ಮತ್ತು ಶಾಲಾ, ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿ ಪೂಜಿಸುವ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ ಎಂದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…
ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…