ರಾಜ್ಯ

ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕರೆ

ಬೆಂಗಳೂರು: ಕಳೆದ 94 ವರ್ಷಗಳ ನಂತರ ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಯಲ್ಲಿ ಜಾತಿಗಣತಿಯನ್ನು ನಡೆಸುತ್ತಿದ್ದು, ಒಕ್ಕಲಿಗ ಜನಾಂಗದವರು ಸಮೀಕ್ಷೆ ಸಂದರ್ಭದಲ್ಲಿ ಜಾತಿ, ಉಪಜಾತಿ ಹಾಗೂ ಸಮನಾಂತರ ಜಾತಿ ಕಾಲಂಗಳಲ್ಲಿ ಒಕ್ಕಲಿಗ ಎಂದೇ ಬರೆಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದ್ದಾರೆ.

ಈ ಸಂಬಂಧ ಸಂದೇಶ ನೀಡಿರುವ ಅವರು, ಸೆಪ್ಟೆಂಬರ್.22ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರತಿ ಜನಾಂಗದವರಿಗೂ ಈ ಸಮೀಕ್ಷೆ ನಮ್ಮ ನಮ್ಮ ಮಕ್ಕಳ ಮತ್ತು ಜನಾಂಗದ ಭವಿಷ್ಯದ ದೃಷ್ಟಿಯಿಂದ ಬಹು ಮುಖ್ಯವಾಗಿದೆ ಎಂದಿದ್ದಾರೆ.

60 ವಿವಿಧ ವಿಷಯಗಳೊಂದಿಗೆ ಗಣತಿದಾರರು ಮನೆಗಳಿಗೆ ಬಂದಾಗ ತಪ್ಪದೇ ಇದ್ದು, ಮಾಹಿತಿಯನ್ನು ನಿಖರವಾಗಿ, ವಸ್ತುನಿಷ್ಠವಾಗಿ, ವಿಚಾರಬದ್ಧವಾಗಿ ನೀಡಿ. ಧರ್ಮದ ಕಾಲಂ 8ರಲ್ಲಿ ಹಿಂದೂ ಎಂದೂ, ಜಾತಿ ಕಾಲಂ 9ರಲ್ಲಿ ಒಕ್ಕಲಿಗ ಎಂದೂ, ಕಾಲಂ 10ರಲ್ಲಿ ಉಪಜಾತಿಯನ್ನು ಒಕ್ಕಲಿಗ ಎಂದೇ ಬರೆಸಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:-ಮೈಸೂರು ದಸರಾ: ನಾಳೆ ಕಾಡಿನತ್ತ ದಸರಾ ಗಜಪಡೆ

ಒಕ್ಕಲಿಗ ಜನಾಂಗವನ್ನು ವ್ಯವಹಾರಿಕ ಭಾಷೆಯಲ್ಲಿ ಗೌಡ, ಗೌಡ ಎಂದು ಹೇಳುತ್ತೇವೆ. ಆದರೆ, ಸಮೀಕ್ಷೆ ಸಂದರ್ಭದಲ್ಲಿ ಎಲ್ಲಿಯೂ ಗೌಡ ಎಂಬುದನ್ನು ನಮೂದಿಸಬೇಡಿ, ಬರೆಸಬೇಡಿ. ನಮ ಉಪಜಾತಿಗಳು ಕುಟುಂಬದ ಸಾಂಸ್ಕೃತಿಕ ಆಚರಣೆಗೆ ಸೀಮಿತವಾಗಿರಬೇಕೇ ಹೊರತು, ದಾಖಲೆಯಲ್ಲಿ ಅಲ್ಲ. ನಾವೆಲ್ಲ ಒಂದೇ ಜಾತಿ ಅದು ಒಕ್ಕಲಿಗ ಕೋಡ್ ನಂಬರ್ 1541 ಎಂದು ಶ್ರೀಗಳು ಹೇಳಿದ್ದಾರೆ.

ಒಂದು ವೇಳೆ ಗಣತಿದಾರರು ಮನೆಗೆ ಬಂದಾಗ ನಾವು ಮನೆಯಲ್ಲಿ ಇಲ್ಲದಿದ್ದರೆ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವೆಬ್‍ಸೈಟ್‍ನಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಿ ಅಪ್‍ಲೋಡ್ ಮಾಡಬಹುದು. ಈ ಸಂದರ್ಭದಲ್ಲಿ ಏನೇ ಕೆಲಸವಿದ್ದರೂ 94 ವರ್ಷಗಳ ನಂತರ ನಡೆಯುವ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸಿ ಸಹಕರಿಸಬೇಕು ಎಂದು ಸ್ವಾಮೀಜಿ ಅವರು ಕರೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

6 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago