ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದವರು.
ಧಾರವಾಡದಲ್ಲಿ ವಾಸವಾಗಿದ್ದ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲೇ ವಿಧಿವಶರಾಗಿದ್ದಾರೆ. ಇಂದು ಸಂಜೆ ಬಿಸರಳ್ಳಿ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ಅಂತ್ಯಕ್ರಿಯೆ ನೆರವೇರಲಿದೆ.
ಇನನು ಪಂಚಾಕ್ಷರಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದು, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸತ್ವ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.