ಬೆಂಗಳೂರು : ಖ್ಯಾತ ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ(80) ಅವರು ಶುಕ್ರವಾರ ಇಹಲೋಕವನ್ನು ತ್ಯಜಿಸಿದ್ದಾರೆ.
ಅವರು ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ 7 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ಕನ್ನಡ ಅಧ್ಯಾಪಕರರಾಗಿ ಸುದೀರ್ಘ ಸೇವೆ ಸಲ್ಲಿಸಿದ ಮೃತರು ಕವಿತೆ, ನಾಟಕ,ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸೇರಿದಂತೆ ಮೊದಲಾದ ಪ್ರಕಾರಗಳಲ್ಲಿ ಅವರು ಸಾಹಿತ್ಯ ಕೃತಿಗಳನ್ನು ಸೃಷ್ಠಿಸಿದ್ದಾರೆ.
ವಿವಿಧ ಪ್ರಶಸ್ತಿ ಪುರಸ್ಕೃರತಾದ ಅವರು, ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.





