ರಾಜ್ಯ

ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಈಶ್ವರ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರನ್ನು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಕೃತಿ, ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಕೋಟ್ಯಾಂತರ ರೂಪಾಯಿಯ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧವಾಗಿದ್ದು, ಅಂತವರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ಈ ರೀತಿ ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧವಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ.

ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮ ವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ, ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

3 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

3 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

3 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

3 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 hours ago