ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.
ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸಲಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಈ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.
82 ವರ್ಷದ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಅವರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಬಿ.ವೈ.ರಾಘವೇಂದ್ರ ಪೋಸ್ಟ್: ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಸದ ರಾಘವೇಂದ್ರ ಅವರು ಭಾವುಕ ಪೋಸ್ಟ್ ಒಂದನ್ನು ಹಾಕಿದ್ದಾರೆ. ರೈತರು, ಬಡವರು ಹಾಗೂ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗಾಗಿ ಅವರ ನಿರಂತರ ಸೇವೆ, ನಿಷ್ಠೆ ಮತ್ತು ದೂರದೃಷ್ಟಿಯ ನಾಯಕತ್ವ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಬಿಜೆಪಿ ಪಕ್ಷವು ಅವರ ನಾಐಕತ್ವದ ಮೇಲೆ ಅಪಾರ ಹೆಮ್ಮೆ ಹೊಂದಿದ್ದು, ಅವರು ಇನ್ನೂ ದೀರ್ಘಕಾಲ ಆರೋಗ್ಯ ಮತ್ತು ಶಕ್ತಿಯೊಂದಿಗೆ ದೇಶ ಮತ್ತು ರಾಜ್ಯಕ್ಕೆ ಮಾರ್ಗದರ್ಶನ ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…