ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈಗಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್ ವೈ ಮೇಲಿತ್ತು. ಈ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪರನ್ನ ಬಂಧಿಸದಂತೆ ಹೈಕೋರ್ಟ್ ಆದೇಶ ಸಹ ಹೊರಡಿಸಿದ್ದರಿಂದ ಬಂಧನ ಭೀತಿಯಿಂದ ಬಿಎಸ್ ವೈ ಪಾರಾಗಿದ್ದರು. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಪೊಲೀಸರು ಸಲ್ಲಿಸಿದ್ದಾರೆ.