ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ.
ಪ್ರತಾಪ್‌ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ದಿಷ್ಟವಾದ ಕಾರಣ ಏನೂ ಇಲ್ಲ. ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್. ಅವರನ್ನು ಎಲ್ಲಾ ಕಡೆಗಳಲ್ಲಿ ಬಳಸಿಕೊಳ್ಳುತ್ತೇವೆ. ರಾಜವಂಶಸ್ಥ ಯದುವೀರ್ ಅವರಿಂಗಿತಲೂ ಉತ್ತಮ ಅಭ್ಯರ್ಥಿ ಬೇಕಾ ಎಂದು ಪ್ರಶ್ನೆ ಮಾಡಿದರು.
ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ಧಿಷ್ಟವಾದ ಕಾರಣ ಅಂತ ಏನು ಇಲ್ಲ. ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ ಅವರಿಗೆ ಸ್ಟಾರ್ ಪ್ರಚಾರಕ ಸ್ಥಾನವೇ ಕೊಟ್ಟಿದ್ದೇವೆ ಎಂದರು.
ಕೆ.ಎಸ್ ಈಶ್ವರಪ್ಪ ಬಂಡಾಯಕ್ಕೆ ಸಂಬಂಧಿಸಿದಂತೆ, ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಬಂಡಾಯವಿಲ್ಲ. ನಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಶುರು ಮಾಡಿದ್ದಾರೆ ಅಷ್ಟೆ ಎಂದರು.
ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ನಮ್ಮ ಪಕ್ಷದ ಬೆಂಬಲಿಗರು ಮತ್ತು ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…