ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿ ಇಲ್ಲ ಅಂತಾನೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು-ಕೊಡಗು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ನಲ್ಲಿ ಹೆಚ್ಚು ಅಭ್ಯರ್ಥಿಗಳು ಇರುವುದರಿಂದ ಆಯ್ಕೆ ಕಗ್ಗಂಟಾಗಿದೆ. ಒಂದೊಂದು ಕಡೆ ಮೂರು ನಾಲ್ಕು ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಬಿಜೆಪಿಯವರು ಮೈಸೂರಿನಲ್ಲಿ ಇರೋ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ. ಆಗ ಇವರಿಗೆ ಕ್ಯಾಂಡಿಡೇಟ್ ಇದ್ರಾ?. ಯದುವೀರ್ ಅವರನ್ನು ಈಗ ಸ್ಪರ್ಧೆ ಮಾಡಿಸಿದ್ದಾರೆ ಎಂದರು.
ಮೈಸೂರಿನಲ್ಲಿ ಯಧುವೀರ್ ರಾಜ ಸ್ಪರ್ಧೆ ಎಂಬ ಪ್ರಶ್ನೆಗೆ ಯಾರು ರಾಜಾ ಎಂದು ಪ್ರಶ್ನಿಸಿ ಸಿದ್ದರಾಮಯ್ಯ, ಅವರು ಬಿಜೆಪಿ ಅಭ್ಯರ್ಥಿ ಬಿಡಪ್ಪ. ನನಗೆ ಮೈಸೂರು ಮಾತ್ರ ಅಲ್ಲ. ಇಡೀ ರಾಜ್ಯವೇ ಸ್ವಕ್ಷೇತ್ರ. ನಾನು ಓದಿದ್ದು ಮೈಸೂರಿನಲ್ಲಿ ಮಾತ್ರ. ಮೈಸೂರು ಜಿಲ್ಲೆಯ ಒಂದು ಹಳ್ಳಿಯವನು ಅಷ್ಟೇ. ಆದ್ರೆ 28 ಕ್ಷೇತ್ರಗಳೂ ನಮ್ಮವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಸಿಎಂ ಡಿ.ವಿ ಸದಾನಂದ ಗೌಡರಿಗೆ ಕಾಂಗ್ರೆಸ್ ಸಂಪರ್ಕ ಮಾಡಿದೆ ಅನ್ನೋ ವಿಚಾರ ನನಗೆ ಗೊತ್ತಿಲ್ಲ. ನಾನು ಊಹಾಪೋಹದ ಪ್ರಶ್ನೆಗಳಿಗೆ ಉತ್ತರಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…