ದಾವಣಗೆರೆ: ಇಲ್ಲಿನ ಬಿಜೆಪಿ ಲೋಕಸಭಾ ಆಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡಲು ದಾವಣಗೆರೆಗೆ ಆಗಮಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ನದತ್ತ ಚಾಮರಾಜ ಒಡೆಯರ್ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾತನಾಡಿದ್ದಾರೆ.
ಇಲ್ಲಿನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮೂರನೇ ಅವಧಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಜನರು ಸಂಕಲ್ಪ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿಗತಿಯಲ್ಲಿ ಮಹತ್ತರ ಬದಲಾವಣೆಗಳಾಗಿದೆ. ಮೋದಿ ತಮ್ಮ ಕಾರ್ಯಕ್ಷಮತೆಯಿಂದಾಗಿ ವಿಶ್ವನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಎನ್‌ಡಿಎ ಅವಧಿಯಲ್ಲಿ ದೇಶದ ಅಭಿವೃದ್ಧಿಯಾಗಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ, ಕಳೆದ ಹತ್ತು ವರ್ಷಗಳ ಮೋದಿ ಅವರ ಅವಧಿಯಲ್ಲಿ ದೇಶ ಅಭಿವೃದ್ಧಿ ಹೊಂದಿರುವುದು ನಮ್ಮ ಕಣ್ಣಮುಂದೆಯಿದೆ. ಮೋದಿ ಅವರ ಪ್ರಗತಿಪರ ಸಾಧನೆಗಳ ಬಲದಿಂದಲೇ ನಾವೆಲ್ಲಾ ಈ ಬಾರಿಯ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದೇವೆ. ಇನ್ನು ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆದಿರುವ ಚುನಾವಣೆಯಲ್ಲಿ ಎಲ್ಲಾ 14 ಕ್ಷೇತ್ರಗಳಲ್ಲಿ ಬಿಜೆಪಿಯೇ ವಿಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಹಾಸನದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ವಿಚಾರದ ಬಗ್ಗೆ ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸರ್ಕಾರವೂ ಸಹಾ ತನ್ನ ನಿಲುವನ್ನು ಪ್ರಕಟಿಸಿದೆ. ಈ ವಿಷಯದ ತನಿಖೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯೆ ನೀಡಲಾಗುವುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…