ಬೆಂಗಳೂರು: ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.
ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷ ಅನುಮೋದಿಸಿದೆ.
ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ. ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಈ ಪಟ್ಟಿಯನ್ನು ಸಿಎಂ ಮತ್ತು ಡಿಸಿಎಂ ಅವರು ಸಿದ್ದಪಡಿಸಿದ್ದು, ಇಂದು ಅಥವಾ ನಾಳೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಪಟ್ಟಿ ಸಿದ್ದಪಡಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್ ಪಟ್ಟ ಎನ್ನಲಾಗಿದೆ.