ರಾಜ್ಯ

ಪರಿಷತ್‌ ಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಇದೇ ಜೂನ್‌ 13ರಂದು ನಡೆಯಲಿರುವ ವಿಧಾನ ಪರಿಷತ್‌ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.

ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಮ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷ ಅನುಮೋದಿಸಿದೆ.

ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ. ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್‌ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಈ ಪಟ್ಟಿಯನ್ನು ಸಿಎಂ ಮತ್ತು ಡಿಸಿಎಂ ಅವರು ಸಿದ್ದಪಡಿಸಿದ್ದು, ಇಂದು ಅಥವಾ ನಾಳೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್‌ ಲಿಸ್ಟ್‌ ಪಟ್ಟಿ ಸಿದ್ದಪಡಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್‌ ಹೈಕಮಾಂಡ್‌ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್‌ ಪಟ್ಟ ಎನ್ನಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago