ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಮಾಧ್ಯಮವಿರುವ ಖಾಸಗಿ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.17) ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ಪ್ರಸ್ತುತ ವಿದ್ಯಮಾನಗಳಲ್ಲಿ ಕನ್ನಡ ಶಾಲೆಗಳನ್ನು ನಡೆಸೋದು ತುಂಬಾ ಕಷ್ಟವಾಗಿದೆ. ರಾಜ್ಯದ ಹಲವು ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಸಂಕಷ್ಟದಲ್ಲಿ ಸಿಲುಕಿವೆ. ಹಾಗಾಗಿ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕನ್ನಡ ಉಳಿವಿಗಾಗಿ ಕನ್ನಡ ಶಾಲೆ ನಡೆಸುತ್ತಿರೋ ಎಲ್ಲಾ ಖಾಸಗಿ ಶಾಲೆಗಳಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯ ಸರ್ಕಾರದಂದ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚು ಸಹಕಾರ ನೀಡುತ್ತಿದ್ದೇವೆ. ಹೀಗಾಗಿ ಕನ್ನಡ ಕಲಿಸೋ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.





