ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ ಅಷ್ಟೇ. ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆಗಳು ಆಗುವುದಿಲ್ಲ. ಮುಂದಿನ ದಿನಗಳಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ನಡೆಯಲಿದೆ. ಹಾಗಾಗಿ ಈ ಬಗ್ಗೆ ಯಾವುದೇ ರೀತಿಯ ಚರ್ಚೆಗಳನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ವರಿಷ್ಠರು ಮತ್ತು ಶಾಸಕರ ಅಭಿಪ್ರಾಯದಂತೆ ಕಾರ್ಯ ನಿರ್ವಹಿಸಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಕಲಹಗಳು ಇಲ್ಲ. ಹೀಗಾಗಿ ಮುಂದಿನ ದಿನಗಳಲ್ಲೂ ಸಹ ಸರ್ಕಾರ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಲಿದೆ ಎಂದರು.





