ರಾಜ್ಯ

ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಡಿಕೆಶಿ ಹೇಳಿಕೆ| ಅದು ಅವರ ವೈಯಕ್ತಿಕ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ ಅಷ್ಟೇ. ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆಗಳು ಆಗುವುದಿಲ್ಲ. ಮುಂದಿನ ದಿನಗಳಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ನಡೆಯಲಿದೆ.  ಹಾಗಾಗಿ ಈ ಬಗ್ಗೆ ಯಾವುದೇ ರೀತಿಯ ಚರ್ಚೆಗಳನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ವರಿಷ್ಠರು ಮತ್ತು ಶಾಸಕರ ಅಭಿಪ್ರಾಯದಂತೆ ಕಾರ್ಯ ನಿರ್ವಹಿಸಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಆಂತರಿಕ ಕಲಹಗಳು ಇಲ್ಲ. ಹೀಗಾಗಿ ಮುಂದಿನ ದಿನಗಳಲ್ಲೂ ಸಹ ಸರ್ಕಾರ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

1 hour ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

2 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

2 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

2 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

2 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

2 hours ago