ರಾಜ್ಯ

ಬಸವಣ್ಣನವರ ಬಗ್ಗೆ ಯತ್ನಾಳ್‌ ವಿವಾದಾತ್ಮಕ ಹೇಳಿಕೆ: ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ನಾವು ಹೋರಾಟ ಮಾಡಲು ಹೆದರಿದರೆ ಬಸವಣ್ಣನವರ ಹಾಗೇ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿ, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಅಲ್ಲದೇ ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಸವಣ್ಣನವರ ಹಾಗೆ ಹೊಳೆ ಹಾರಬೇಕು ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರೇ, ಬಸವಣ್ಣನವರು ಹೊಳೆಗೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ.
ನಿಮ್ಮ ಪ್ರಕಾರ ಬಸವಣ್ಣನವರು ಹೊಳೆಗೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ? ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಬಿಜೆಪಿಯವರಿಗೆ ಇದೆಯೇ? ಎಂದು ಸವಾಲು ಎಸೆದಿದ್ದಾರೆ.

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

23 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

49 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago