Mysore
24
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ವಿನಯ್‌ ಆತ್ಯಹತ್ಯೆ ಪ್ರಕರಣ| ಬಿಜೆಪಿ ನಾಯಕರು ಅಡ್ಜ್‌ಸ್ಟ್‌ಮೆಂಟ್ ಮಾಡಿಕೊಳ್ಳದೇ ಹೋರಾಟ ನಡೆಸಲಿ: ಯತ್ನಾಳ್‌

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸರ್ಕಾರದೊಂದಿಗೆ ಅಡ್ಜ್‌ಸ್ಟೆಮೆಂಟ್‌ ಮಾಡಿಕೊಳ್ಳದೇ ಹೋರಾಟ ನಡೆಸಿ ಆತನ ಸಾವಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್‌ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ. ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೇ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು ಎಂದು ಕಿಡಿಕಾರಿದ್ದಾರೆ.

ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಅಲ್ಲದೇ ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.

Tags:
error: Content is protected !!